ಬೆಂಗಳೂರು: ಸಿಲಿಕಾನ್ ಸಿಟಿಯ ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದೆ. ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ನೆಟ್‌ವರ್ಕ್ ಸಮಸ್ಯೆಗೆ ಪರಿಹಾರವಾಗಿ ವೈಫೈ ಸಿಗಲಿದೆ.
ಮೆಟ್ರೊದಲ್ಲಿ ನೆಟ್‌ವರ್ಕ್ ಸಿಗದೆ ಪ್ರಯಾಣಿಕರು ಹೈರಾಣಾಗಿದ್ದರು. ಅದರಲ್ಲೂ ಸುರಂಗ ಮಾರ್ಗದಲ್ಲಂತೂ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿತ್ತು. ಈ ಸಮಸ್ಯೆ ಇನ್ನು ಮುಂದೆ ಇರಿವುದಿಲ್ಲ.
ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ಸ್ಡ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಮೆಟ್ರೋ ಮಾರ್ಗದ ಅಲ್ಲಲ್ಲಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ನೆಟ್‌ವರ್ಕ್ ಸಮಸ್ಯೆ ತಪ್ಪಲಿದೆ. ವಿಶೇಷವಾಗಿ ಭೂಗತ ಮಾರ್ಗವಿರುವ ಡೈರಿ ವೃತ್ತದಿಂದ ನಾಗವಾರದವರೆಗೆ 12 ನಿಲ್ದಾಣಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಆಗಲಿದೆ.
ಪ್ರಯಾಣ ದರದ ಹೊರತಾಗಿ ನಿಗಮಕ್ಕೆ ಆದಾಯ (ವೈ-ಫೈಗೆ ವಿಧಿಸುವ ಶುಲ್ಕದ ರೂಪದಲ್ಲಿ) ಕೂಡ ಬರಲಿದೆ. ಇದು 13 ವರ್ಷಗಳ ಪರವಾನಗಿ ಅವಧಿಯ ಒಪ್ಪಂದವಾಗಿದೆ. ಈ ವೇಳೆ ಬಿಎಂಆರ್‌ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಎಸಿಇಎಸ್‌ಇ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಎನ್. ಮಝರ್ ಸಹಿಹಾಕಿದರು.