ಬೆಂಗಳೂರು: ಸದ್ಯ ರಾಜ್ಯದಲ್ಲಿ ಮೆಟ್ರೋ ದರ ಏರಿಕೆ ವಿಚಾರ ಭಾರೀ ಚರ್ಚೆಯಲ್ಲಿದೆ. ವ್ಯಾಪಕ ವಿರೋಧದ ಬೆನ್ನಲ್ಲೇ ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲೆಲ್ಲಿ 90%, 100% ಜಂಪ್ ಆಗಿದೆಯೋ ಎಲ್ಲೆಲ್ಲಿ ಬದಲಾವಣೆ ಮಾಡುತ್ತೇವೆ.
ಈ ಮೂಲಕ ಪ್ರಯಾಣಿಕರಿಗೆ ಸ್ವಲ್ಪ ರಿಲೀಫ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ಬಗ್ಗೆ ನಿನ್ನೆಯಿಂದ ಚರ್ಚೆ ನಡೆಯುತ್ತಿದೆ ಎಂದರು.
ಮೆಟ್ರೋ ದರ ಏರಿಕೆಯಾಗುತ್ತಿದ್ದ ಹಾಗೇ ಸಾರ್ವಜನಿಕರಿಂದ ಬಿಎಂಆರ್‌ಸಿಎಲ್ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧ ಜಾಸ್ತಿ ಆಗುತ್ತಿದ್ದಂತೆ ಎಚ್ಚೆತ್ತ ಬಿಎಂಆರ್‌ಸಿಎಲ್ ದರವನ್ನು ಇಳಿಸಲು ಮುಂದಾಗಿದೆ.