ಬಿಎಂಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸಾವು

ಮಂಗಳವಾರ, 3 ಮಾರ್ಚ್ 2015 (11:21 IST)
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಖಾಸಗಿ ಕಂಪೆನಿ ಉದ್ಯೋಗಿ ತ್ರಿಶೂಲ್(27) ಎಂಬವರು ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.  

ಮಾಣಿಕ್ ಶಾ ಪರೇಡ್ ಮೈದಾನದ ರಸ್ತೆಯಲ್ಲಿ  ಈ ಅಪಘಾತ ಸಂಭವಿಸಿದೆ. ಶಿವಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ