ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್. ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳುತ್ತದೆ. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ಎಡಿಜಿಪಿ, ಎಸ್‌ಪಿ, ಡಿವೈಎಸ್‌ಪಿ ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಆರ್‌ಟಿಐನಲ್ಲಿ ಪಡೆದ ದಾಖಲೆಗಳು ಇದಕ್ಕೆ ಪುಷ್ಠಿ ನೀಡುವಂತಿದೆ.