ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತ
ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.
ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರೋದ್ರಿಂದ ಮುಜಾಗೃತ ಕ್ರಮವಾಗಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿತ್ತು. ಜೊತೆಗೆ ಪ್ರಸಿದ್ಧ ಪ್ರವಾಸಿ ತಾಣವಾಗಿರೊ ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಅಣೆಕಟ್ಟೆಯಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರೋದ್ರಿಂದ ಕಾವೇರಿ ನದಿ ಹುಕ್ಕಿ ಹರಿಯುತ್ತಿದೆ. ಅಣೆಕಟ್ಟೆ ಭರ್ತಿಯಾಗಿರುವುದು ಬರದಿಂದ ತತ್ತರಿಸಿದ್ದ ಮಂಡ್ಯ ಜಿಲ್ಲೆಯ ರೈತರ ಮೊಗದಲ್ಲಿ ಸಂತಸ ತರಿಸಿದೆ.