ರಾಜ್ಯಕ್ಕೆ ಬರಬೇಕಾದ 5500 ಕೋಟಿ ರೂ.ವನ್ನು ಕೇಂದ್ರ ಹಣಕಾಸು ಸಚಿವರು ತಡೆ ಹಿಡಿದಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, 15 ನೇ ಹಣಕಾಸಿನ ಶಿಫಾರಸ್ಸಿನ ಪ್ರಕಾರ ರಾಜ್ಯಕ್ಕೆ ಹಣ ಬರಬೇಕು ನಿಜ. ಈ ಬಗ್ಗೆ ಕೇಂದ್ರಕ್ಕೆ ಸಿಎಂ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ಹೋಗಿ ರಾಜ್ಯದ ಹಕ್ಕನ್ನ ಪಡೆಯುವ ಕೆಲಸ ಮಾಡುತ್ತೇವೆ ಎಂದರು.
ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ರಾಜ್ಯವೇ ಕಡಿತಗೊಳಿಸಲಿ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೆಸ್ ಎರಡು ಕಡೆ ಇದೆ. ಇದು ಇಡೀ ದೇಶದ ವಿಚಾರ, ಒಕ್ಕೂಟ ವ್ಯವಸ್ಥೆಯಲ್ಲಿ ಎರಡು ಕಡೆ ಕೂತು ಚರ್ಚೆ ಮಾಡಿ ತೀರ್ಮಾನ ಮಾಡಬೇಕಾಗತ್ತೆ. ಸಾಮಾನ್ಯ ಜನರ ಮೇಲಿನ ಹೊರೆ ಕಡಿಮೆ ಮಾಡುವುದಕ್ಕೆ ಎಲ್ಲರೂ ಒಗ್ಗಟ್ಟಿನಿಂದ ತೀರ್ಮಾನ ಮಾಡುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟರು.