ಚುನಾವಣೆ ರ್ಯಾಲಿಯಲ್ಲಿ ಬಾಂಬ್ ಬ್ಲಾಸ್ಟ್ : 10 ಸಾವು, ಹತ್ತು ಜನ ಗಂಭೀರ
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಕೀಯ ವೈಷಮ್ಯದಿಂದಾಗಿ ಚುನಾವಣೆ ರ್ಯಾಲಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಷ್ಟ್ರಾಧ್ಯಕ್ಷ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬ್ಲಾಸ್ಟ್ ಆದ ಸಂದರ್ಭದಲ್ಲಿ ರಾಷ್ಟ್ರದ ಅಧ್ಯಕ್ಷರು ಹಾಜರಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಫ್ಘಾನಿಸ್ತಾನ ರಾಷ್ಟ್ರಾಧ್ಯಕ್ಷ ಆಶ್ರಫ್ ಘನಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ರು. ಸೆ. 28 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ರ್ಯಾಲಿಯಲ್ಲಿಯೇ ಆಶ್ರಫ್ ರನ್ನ ಗುರಿಯಾಗಿಸಿಕೊಂಡು ಬಾಂಬ್ ಬ್ಲಾಸ್ಟ್ ಮಾಡಲಾಗಿದೆ. ಆದರೆ ಅವರು ಬದುಕಿ ಉಳಿದಿದ್ದಾರೆ.