ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಗೃಹ ಸಚಿವರು

ಬುಧವಾರ, 22 ಜನವರಿ 2020 (10:17 IST)
ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಇಟ್ಟಿದ್ದ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಕೇಸ್ ಸಂಬಂಧ ಯಾರ ಮೇಲೂ ನಾವು ಆರೋಪಿಸಿರಲಿಲ್ಲ. ಯಾವುದೇ ವ್ಯಕ್ತಿ, ಸಂಘಟನೆ ಬಗ್ಗೆ ನಾವು ಮಾತನಾಡಿರಲಿಲ್ಲ. ತಪ್ಪಿತಸ್ಥರನ್ನು ಹಿಡಿಯುತ್ತೇವೆಂದು ಹೇಳಿದ್ದೆವು, ಹಿಡಿದಿದ್ದೇವೆ, ಪೊಲೀಸರು ಪ್ರಾಮಾಣಿಕ, ನಿಷ್ಪಕ್ಷಪಾತ ತನಿಖೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.


ಹಾಗೇ ಈ ಪ್ರಕರಣದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಪೊಲೀಸರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂಥ ಹೇಳಿಕೆ ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ