ಬೆಂಗಳೂರಿನ ಐಟಿ ಕಚೇರಿಗೆ ಬಾಂಬ್ ಬೆದರಿಕೆ

ಗುರುವಾರ, 24 ಅಕ್ಟೋಬರ್ 2019 (11:42 IST)
ಬೆಂಗಳೂರು : ಬೆಂಗಳೂರಿನ ಐಟಿ ಕಚೇರಿಗೆ  ಯಾರೋ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದು,  ನಿನ್ನೆ ರಾತ್ರಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕಳುಹಿಸಿದ್ದಾರೆ ಎನ್ನಲಾಗಿದೆ.

 

ಬಾಂಬ್ ಬೆದರಿಕೆಯ ಹಿನ್ನಲೆಯಲ್ಲಿ ಇದೀಗ ಐಟಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ