ಬೆಂಗಳೂರು : ಖಾದಿಗೆ ಉತ್ತಮ ಭವಿಷ್ಯವಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಈ ಬಾರಿಯ ಬಜೆಟ್ನಲ್ಲಿ ದುಡಿಯುವ ವರ್ಗಕ್ಕೆ ಮಹತ್ವ ಕೊಡುತ್ತಿದ್ದೇವೆ.
ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಬಜೆಟ್ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿದ ಅವರು, ಮಹಾತ್ಮ ಗಾಂಧೀಜಿಯವರು ಖಾದಿಗೆ ಬಹಳ ಮಹತ್ವ ಕೊಟ್ಟಿದ್ದರು. ಸ್ವರಾಜ್ಯದ ಪ್ರತೀಕಾರವಾಗಿ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡಲಾಗಿತ್ತು.
ಬೃಹತ್ ಪ್ರಮಾಣದ ಜನಸಂಖ್ಯೆಯಿಂದ ಉತ್ಪಾದನೆಯಾಗಿ ಎಲ್ಲರಿಗೂ ಉದ್ಯೋಗ ಸಿಗಬೇಕು ಎಂದು ಮಹಾತ್ಮ ಗಾಂಧಿಜೀಯವರು ಹೇಳಿದ್ದರು. ಇವತ್ತಿಗೂ ಕೃಷಿಯ ನಂತರ ಅತಿಹೆಚ್ಚು ಉದ್ಯೋಗ ನೀಡುತ್ತಿರುವುದು ಖಾದಿ ಗ್ರಾಮೋದ್ಯೋಗ ಕ್ಷೇತ್ರ ಎಂದು ತಿಳಿಸಿದರು.