ಬೆಂಗಳೂರಿಗೆ ರಿಟರ್ನ್‌ ಟಿಕೆಟ್ ಬುಕ್ ಮಾಡಿ, ಫೇಸ್‌ಬುಕ್‌ನಲ್ಲಿ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

Sampriya

ಬುಧವಾರ, 1 ಮೇ 2024 (17:06 IST)
Photo Courtesy X
ಬೆಂಗಳೂರು: ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ವಿದೇಶದಲ್ಲಿದ್ದು ಇದೇ 3 ರಂದು  ಮಧ್ಯರಾತ್ರಿ ರಾಜ್ಯಕ್ಕೆ ವಾಪಾಸ್ಸಾಗಲಿದ್ದಾರೆ.

ಲೋಕಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದ ಹಾಗೇ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇನ್ನು ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಪ್ರಜ್ವಲ್​ ರೇವಣ್ಣ ಅವರು ಜರ್ಮನಿಯ ಫ್ರಾಂಕ್​ಫರ್ಟ್ ತೆರಳಿದ್ದರು. ಈ ಸಂಬಂಧ ಪ್ರಜ್ವಲ್ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಹಾಗೂ ಎಚ್‌ ಡಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ.

ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ಅವರು ಬೆಂಗಳೂರಿಗೆ ರಿಟರ್ನ್​ ಟಿಕೆಟ್ ಬುಕ್​ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್​ಫರ್ಟ್​ನಿಂದ ಹೊರಡಲಿದ್ದು,​​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಾಜಿ ಮನೆ ಕೆಲಸದಾಕೆ ನೀಡಿದ ಲೈಂಗಿಕ ದೌರ್ಜನ್ಯ ದೂರಿನ ಮೇಲೆ ಪ್ರಜ್ವಲ್ ರೇವಣ್ಣ ಹಾಗೂ ಎಚ್‌ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇನ್ನೂ ಫೇಸ್‌ಬುಕ್ ಮೂಲಕ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
ಸತ್ಯ ಆದಷ್ಟು ಬೇಗ ಹೊರಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ