ಜ.10ರಂದು ಆರಂಭವಾದ ಈ ಲಸಿಕಾಭಿಯಾನದ ಅಡಿಯಲ್ಲಿ ಒಂದೇ ದಿನ ದಾಖಲೆಯ ಸಂಖ್ಯೆಯ ಜನರಿಗೆ ಲಸಿಕೆ ನೀಡಲಾಗಿದೆ.
ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ 9 ಲಕ್ಷಕ್ಕೂ ಹೆಚ್ಚು ಜನರಿಗೆ ನಿನ್ನೆ ಒಂದೇ ದಿನ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
4,91,013 ಮಂದಿ ಆರೋಗ್ಯ ಕಾರ್ಯಕರ್ತರು, 1,90,383 ಮಂದಿ ಮುಂಚೂಣಿ ಕಾರ್ಯಕರ್ತರು ಹಾಗೂ 2,54,868 ಮಂದಿ ಹಿರಿಯರಿಗೆ ಮುನ್ನೆಚ್ಚರಿಕೆಯ ಡೋಸ್ ನೀಡಲಾಗಿದೆ.
ದೇಶದಲ್ಲಿ ಒಟ್ಟಾರೆ 152.78 ಲಕ್ಷ ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಕರ್ನಾಟಕದಲ್ಲಿ 81,728 ಬೂಸ್ಟರ್ ಡೋಸ್‌ಗಳನ್ನು ನೀಡುವ ಮೂಲಕ ಗುಜರಾತ್, ಆಂಧ್ರಪ್ರದೇಶ ಮತ್ತು ರಾಜಸ್ಥಾನದ ನಂತರ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.