ಮಹಾಮಳೆಗೆ ಗಡಿ ಜಿಲ್ಲೆ ತತ್ತರ; ನೀರು ನುಗ್ಗಿದ್ದೆಲ್ಲಿ?
ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಭಾರೀ ಮಳೆಯಿಂದ ರಾಜ್ಯದ ಗಡಿ ಜಿಲ್ಲೆಗಳು ತತ್ತರಿಸಿವೆ. ಏತನ್ಮಧ್ಯೆ ಪರಿಹಾರ ಕಾರ್ಯಾಚರಣೆ ನಡೆಸಿ 20ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಲಾಗಿದೆ.
ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ನುಗ್ಗಿದೆ ಮಳೆ ನೀರು.
ಮಹಾರಾಷ್ಟ್ರದಲ್ಲಿ ಮುಂದುವರೆದ ಭಾರೀ ಮಳೆ ಪರಿಣಾಮ ಗಡಿ ಪ್ರದೇಶಗಳಲ್ಲಿ ಪ್ರವಾಹ ತಲೆದೋರಿದೆ.
ಚಿಕ್ಕೋಡಿ ಭಾಗದ ಜನರು ತತ್ತರಗೊಂಡಿದ್ದಾರೆ.
ಬಾವನ ಸೌಂದತ್ತಿಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಲಾಗಿದೆ. ಎನ್ ಡಿ ಆರ್ ಎಫ್, ಭಾರತೀಯ ಸೇನೆ, ಪೊಲೀಸ್ ಇಲಾಖೆ ಸೇರಿ ಕಾರ್ಯಾಚರಣೆ ನಡೆಸಿದೆ. ಜನರು ಸುರಕ್ಷಿತ ಸ್ಥಳಕ್ಕೆ ತಂದು ಬಿಡಲಾಗುತ್ತಿದೆ.