ಉಭಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ: ಜಿ.ಪರಮೇಶ್ವರ್

ಸೋಮವಾರ, 12 ಸೆಪ್ಟಂಬರ್ 2016 (15:37 IST)
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಗತ್ಯ ಬಿದ್ದರೆ ರಕ್ಷಣೆಗೆ ಕೇಂದ್ರದಿಂದ ಹೆಚ್ಚಿನ ಪೊಲೀಸ್ ಪಡೆಗಳನ್ನು ಕರೆಸಲಾಗುವುದು. ಸಾರ್ವಜನಿಕರು ಶಾಂತಿ ಕಾಪಾಡಿಕೊಂಡು ಹೋಗಬೇಕು ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯಲು ಕನ್ನಡಿಗರು ಹಾಗೂ ತಮಿಳಿಗರು ಅವಕಾಶ ಮಾಡಿಕೊಡದೇ ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಬೇಕು ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1991 ರಲ್ಲಿ ನಡೆದ ಕಹಿ ಘಟನೆ ನಮ್ಮ ಮುಂದಿದೆ. ವಿವಾದಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಮಾಡುವ ಕೃತ್ಯಕ್ಕೆ ಸಾರ್ವಜನಿಕರು ಕಿವಿಗೊಡಬಾರದು. ಈಗಾಗಲೇ ಡಿಜಿಪಿ ಓಂ ಪ್ರಕಾಶ್ ಅವರು ತಮಿಳುನಾಡಿನ ಡಿಜಿ ರಾಜೇಂದ್ರನ್ ಜೊತೆ ಮಾತನಾಡಿದ್ದಾರೆ. ನಾವು ಅಲ್ಲಿಯ ಗೃಹ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ