ಬಿಪಿಎಲ್, ಎಪಿಎಲ್ ಕಾರ್ಡ್ ದಾರರ ಗಮನಕ್ಕೆ: ಜನವರಿ 31 ರೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ಸಿಗಲ್ಲ

Krishnaveni K

ಗುರುವಾರ, 16 ಜನವರಿ 2025 (10:11 IST)
ಬೆಂಗಳೂರು: ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರ ಗಮನಕ್ಕೆ ಈ ಒಂದು ಕೆಲಸ ಮಾಡದೇ ಇದ್ದರೆ ಜನವರಿ 31 ರಿಂದ ನಿಮಗೆ ರೇಷನ್ ಸಿಗಲು ಕಷ್ಟವಾಗಬಹುದು. ಇಲ್ಲಿದೆ ವಿವರ.

ಎಲ್ಲಾ ರೇಷನ್ ಕಾರ್ಡ್ ದಾರರು ತಮ್ಮ ಕುಟುಂಬ ಸದಸ್ಯರ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಜನವರಿ 31 ರೊಳಗಾಗಿ ಇ ಕೆವೈಸಿ ಮಾಡಿಸಬೇಕು ಎಂದು ಆಹಾರ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಕಟ್ಟುನಿಟ್ಟಾಗಿ ಸೂಚಿಸಿದ್ದರು. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಬೇಕು.

ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚು ನೀಡಿ ನವೀಕರಣ ಮಾಡಿಸಿಕೊಳ್ಳಬಹುದು. ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ರೇಷನ್ ಸಿಗದು.

ಹಾಗಾಗಿ ಸರ್ಕಾರ ಈಗ ಕೊಟ್ಟಿರುವ ಜನವರಿ 31 ರ ಗಡುವಿನೊಳಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸಿಕೊಳ್ಳಿ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ