ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಇಂದಿನಿಂದ ಶುರುವಾಗಲಿದೆ. ಇದರಿಂದ ಬಡವರಿಗೂ ಅನ್ಯಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರಲು ರಾಜ್ಯ ಸರ್ಕಾರ ಕೆಲವೊಂದು ನಿಯಮಗಳನ್ನು ಹಾಕಿದೆ. ಅದರಂತೆ ಆದಾಯ ಮಿತಿ, ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದರಿಂದಾಗಿ ರಾತ್ರೋ ರಾತ್ರಿ ಹಲವು ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಆಗಿ ಬದಲಾಗಿದೆ. ಇದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೆಲವು ಅರ್ಹರಿಗೂ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಜನರೇ ಸರ್ಕಾರಕ್ಕೆ ಹಿಡಿಶಾಪ ಹಾಕುವಂತಾಗಿದೆ. ಹೀಗಾಗಿ ಸರ್ಕಾರ ಎಚ್ಚರಿಕೆಯ ಹೆಜ್ಜೆಯಿಡಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ಖಡಕ್ ಸೂಚನೆ ನೀಡಿದ್ದಾರೆ.
ಸಿಎಂ ಈಗ ಹೋದಲ್ಲೆಲ್ಲಾ ಬಡವರಿಗೆ ಅನ್ಯಾಯವಾಗುತ್ತಿದೆ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಸಿಎಂ ಕೂಡಾ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲ್ಲ ಎನ್ನುತ್ತಲೇ ಬಂದಿದ್ದಾರೆ. ಇದೀಗ ಪರಿಷ್ಕರಣೆ ಮಾಡುವಾಗ ಯಾವುದೇ ತಪ್ಪುಗಳಾಗದಂತೆ ನೋಡಿಕೊಳ್ಳಲು ಸಿಎಂ ಸಲಹೆ ನೀಡಿದ್ದಾರೆ.