ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿವೊಂದನ್ನು ನೀಡಿದ್ದು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಕಾರ್ಯಾರಂಭ ಮಾಡಿದ ಅಲ್ಪಾವಧಿಯಲ್ಲೇ ವ್ಯವಸ್ಥೆಯೊಳಗೇ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ನೆರವು ನೀಡಲು ಮಂಡಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಬ್ರಾಹ್ಮಣ ರೈತರಿಗೆ ಕೃಷಿ ಆಧಾರಿತ ಉದ್ಯಮ ಸ್ಥಾಪನೆಗೆ ನೆರವು ನೀಡುವ ಅನ್ನದಾತ ಯೋಜನೆಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಒದಗಿಸುವ ಪುರುಷೋತ್ತಮ ಯೋಜನೆಗೆ ಚಾಲನೆ ನೀಡಿದರು.