CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ
ಶಿವಮೊಗ್ಗ ಮತ್ತು ಬೀದರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಗಾಯತ್ರಿ ದಾರ ಮತ್ತು ಕೈಯಲ್ಲಿರುವ ಕಾಕಿದಾರವನ್ನು ಕಿತ್ತು ಹಾಕಲು ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ ಎಂದು ಪೋಷಕರು ದೂರು ನೀಡಿದ್ದರು.
ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಿತ್ತು ಹಾಕಿ ಅವಮಾನ ಮಾಡಲಾಗಿದೆ. ಇದರ ಬಗ್ಗೆ ಸ್ಥಳಕ್ಕೆ ಆಗಮಿಸಿದ ಬ್ರಾಹ್ಮಣ ಸಂಘಟನೆಗಳು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೇರೆ ಸಮುದಾಯದವರಾಗಿದ್ದರೆ ಈ ರೀತಿ ಮಾಡಲು ಬಿಡುತ್ತಿದ್ದಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ, ಬೀದರ್ ನ ಬ್ರಾಹ್ಮಣ ಸಂಘಟನೆಗಳು ಈ ಬಗ್ಗೆ ದೂರು ದಾಖಲಿಸಿವೆ. ಇದಾದ ಬಳಿಕ ಪ್ರತಿಕ್ರಿಯಿಸಿರುವ ಕೆಇಎ ಅಧಿಕಾರಿಗಳು ವರದಿ ಪಡೆಯುವುದಾಗಿ ಸ್ಪಷ್ಟನೆ ನೀಡಿದ್ದಾರೆ.