ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ಶ್ರೀನಿರ್ಮಲಾನಂದ ಸ್ವಾಮೀಜಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಸಚಿವ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ-ನಂಜೇಗೌಡ ಚಿತ್ರದ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಈ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಮುನಿರತ್ನ, ನಾನೊಬ್ಬ ನಿರ್ಮಾಪಕನಾಗಿ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣ ಮಾಡೋಣ ಅಂದುಕೊಂಡಿದ್ದೆ. ಇದೀಗ ನಾನು ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಚರ್ಚಿಸಿದ್ದು, ಸಿನಿಮಾ ನಿರ್ಮಿಸಲ್ಲ ಎಂದು ಹೇಳಿದರು.