ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಚಿಂಚನಸೂರ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಮುಖ್ಯಮಂತ್ರಿಯವರು ತಕ್ಷಣವೇ ಇವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇವರನ್ನು ಕೈಬಿಡದಿದ್ದರೆ, ಈ ಭ್ರಷ್ಟ ಹಣದಲ್ಲಿ ತಮ್ಮಗೂ ಪಾಲು ಇದೆ ಎಂದು ಅರ್ಥ. ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.