ಸಿಎಂ ಸ್ವಕ್ಷೇತ್ರದ ಸರಕಾರಿ ಆಸ್ಪತ್ರೆಯಲ್ಲಿ ಲಂಚದ ಬೇಡಿಕೆ?

ಮಂಗಳವಾರ, 21 ಆಗಸ್ಟ್ 2018 (15:12 IST)
ಸಿಎಂ ತವರು ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲಾಸ್ಪತ್ರೆ ಎದುರು ಅಂಬೇಡ್ಕರ್ ಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಆಸ್ಪತ್ರೆಯಲ್ಲಿ ಐಸಿಯು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇಲ್ಲ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ಕೊಡಲು ಸಿಬ್ಬಂದಿ ಹಾಗೂ ವೈದ್ಯರು ಹಣದ ಬೇಡಿಕೆ ಇಡುತ್ತಾರೆ. ಹಣ ಕೊಡದಿದ್ದರೆ ರೋಗಿಗಳಿಗೆ ಕೀಳಾಗಿ ನೋಡುತ್ತಾರೆ ಎಂದು ಆರೋಪಿಸಿದ್ರು.

ಇನ್ನು ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇನೆಯ ಹತ್ತಾರು ಕಾರ್ಯಕರ್ತರು ಭಾಗಿಯಾಗಿದ್ದರು. ಆದಷ್ಟು ಬೇಗ ಮೂಲಭೂತ ಸೌಕರ್ಯ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ