ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿವೇಕ್ ಬ್ಯಾಂಡ್ ಅಭಿಯಾನ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮತ್ತು ಬರ ಕುರಿತಂತೆ ರಾಜ್ಯ ಸರಕಾರದ ಗಮನ ಸೆಳೆಯಬೇಕಾಗಿದೆ. ಈ ಕುರಿತ ವಿಷಯಗಳಿಗೆ ಮಾತ್ರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಶಾಸಕ ರಾಜು ಕಾಗೆ ವಿರುದ್ಧದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ವಿಷಯ. ಆದರೆ, ಜನಪ್ರತಿನಿಧಿಗಳು ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಬಿಜೆಪಿ ಸಹಿಸುವುದಿಲ್ಲ. ಅವರು ಪಕ್ಷದಿಂದ ಆಯ್ಕೆ ಆಗಿರುವ ಕಾರಣ ಪಕ್ಷ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೆ ಎಂದು ಭರವಸೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಇಲ್ಲ. ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿತ್ತು. ಆದರೆ, ಇದೀಗ ಬ್ರಿಗೇಡ್‌ನ ನಿಲವು ಬದಲಾಯಿಸಲಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದರು.