ರಾಜೀನಾಮೆ ನೀಡಿದ ಬ್ರಿಜೇಶ್‌ ಕಾಳಪ್ಪ?

ಬುಧವಾರ, 1 ಜೂನ್ 2022 (09:19 IST)
ಬೆಂಗಳೂರು : ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ. ಬ್ರಿಜೇಶ್ ಕಾಳಪ್ಪ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಯಿದೆ.

2014 ಮತ್ತು 2019ರ ಸೋಲಿನ ಬಳಿಕ ಪಕ್ಷಕ್ಕೆ ಕೆಟ್ಟ ಸಮಯ ಬಂದರೂ ನಾನು ಉತ್ಸಾಹವನ್ನು ಕಳೆದುಕೊಂಡಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಾನು ಉತ್ಸಾಹ ಕಳೆದುಕೊಂಡಿದ್ದೇನೆ. ಹೀಗಾಗಿ 1997 ರಿಂದ ಆರಂಭವಾದ ಪಕ್ಷ ನಂಟಿಗೆ ಕೊನೆ ಹೇಳುತ್ತಿದ್ದು,  ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ