ಬ್ರಿಟಿಷರು ಭಾರತದ ಸಂಪತ್ತನ್ನ ಹೊತ್ತೊಯ್ದರು, ಇಂದು ಬಂಡವಾಳಿಗರ ಬಳಿ ಶೇಖರಣೆಗೊಳ್ತಿದೆ : ಸಿದ್ದರಾಮಯ್ಯ

ಮಂಗಳವಾರ, 15 ಆಗಸ್ಟ್ 2023 (11:01 IST)
ಬೆಂಗಳೂರು : ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಬಳಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ, ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ಇದು ಜನರಿಗೆ ಅರ್ಥವಾಗಿರೋದ್ರೀಂದ ದೃಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಅಂತ ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ಇದೇ ವೇಳೆ 5 ಗ್ಯಾರಂಟಿಗಳ ಪ್ರಸ್ತಾಪ ಮಾಡಿದ ಸಿಎಂ, ಶಕ್ತಿ ಯೋಜನೆಯಿಂದ ನಿತ್ಯ 50-60 ಲಕ್ಷ ಮಹಿಳೆಯರು ನಿತ್ಯ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೂವರೆಗೆ 38.54 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಆಗಸ್ಟ್ 27 ರಿಂದ ಗೃಹಲಕ್ಷ್ಮಿ ಯೋಜನೆ, ಜುಲೈ 1 ರಿಂದ ಗೃಹಜ್ಯೋತಿ ಯೋಜನೆ ಜಾರಿಗೆ ಬರಲಿದೆ. ಇದುವರೆಗೆ ಗೃಹಜ್ಯೋತಿ ಯೋಜನೆಗೆ 1.49 ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ, ಬಾಡಿಗೆದಾರರೂ ಇದರ ಪ್ರಯೋಜನ ಪಡೆಯಲಿದ್ದಾರೆ. 

ಈ ಯೋಜನೆಗೆ 13,910 ಕೋಟಿ ಖರ್ಚಾಗಲಿದೆ. ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ಯೋಜನೆ ಜಾರಿ ಮಾಡಿದ್ದೇವೆ. ಈವರೆಗೆ 1.04 ಕೋಟಿ ಕುಟುಂಬಗಳಿಗೆ ನಗದು ವರ್ಗಾವಣೆ ಆಗಿದೆ. ಉಳಿದ ಕುಟುಂಬಗಳಿಗೆ ಶೀಘ್ರವೇ ಹಣ ವರ್ಗಾವಣೆ ಮಾಡಲಾಗುತ್ತದೆ.

ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ. ವಸಾಹತುವಾದ ಮತ್ತು ಸಾಮ್ರಾಜ್ಯವಾದಗಳು ಜೀವಂತವಾಗಿದ್ದಾಗ, ಸ್ವಾತಂತ್ರ್ಯ ಗಳಿಸಿದರೆ ಸಾಕು ಅಭಿವೃದ್ಧಿ ಎಂಬುದು ತನ್ನಿಂದ ತಾನೆ ಸಾಧ್ಯವಾಗುತ್ತದೆ. ಇದನ್ನು ಭಾವಿಸಿಯೇ ನಮ್ಮ ಹಿರಿಯರು ಹೋರಾಟ ಮಾಡಿದ್ದರು. ಇದು ಸತ್ಯ ಕೂಡ ಆಗಿತ್ತು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ