ತಂಗಿಗೆ ನಕಲು ಮಾಡಲು ಬಿಡಲಿಲ್ಲವೆಂದು ಪೊಲೀಸ್ ಮೇಲೆ ಹಲ್ಲೆ ನಡೆಸಿದ ಅಣ್ಣ

Krishnaveni K

ಶುಕ್ರವಾರ, 22 ಮಾರ್ಚ್ 2024 (13:36 IST)
ಕಲಬುರಗಿ: ತಂಗಿಗಾಗಿ ಅಣ್ಣ ಏನು ಬೇಕಾದರೂ ಮಾಡ್ತಾನೆ ಎಂಬಂತಹ ಹಲವು ಘಟನೆಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ತಂಗಿಯ ಅಕ್ರಮವನ್ನು ಸಮರ್ಥಿಸಿಕೊಂಡಿದ್ದಾನೆ.
 

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ ತಂಗಿಗೆ ನಕಲು ಮಾಡಲು ಬಿಡಲಿಲ್ಲವೆಂದು ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಣ್ಣ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಅಫಜಲಪುರ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದ್ವಿತೀಯ ಪಿಯು ಪರೀಕ್ಷೆ ಕೊನೆಯ ದಿನವಾದ ಇಂದು ತಂಗಿಗೆ ನಕಲು ಮಾಡಲು ಬಿಡಲಿಲ್ಲವೆಂದು ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಅಣ್ಣ ಹಲ್ಲೆ ನಡೆಸಿದ್ದಾನೆ.  

ಪೊಲೀಸ್ ಕಾನ್ಸ್ ಟೇಬಲ್ ಕಾಲರ್ ಹಿಡಿದೆಳೆದು, ಕಲ್ಲು ಎಸೆದು ನಕಲು ಮಾಡಲು ಬಿಡಲ್ವಾ ಎಂದು ಆವಾಜ್ ಹಾಕಿದ್ದಾನೆ. ಈ  ವೇಳೆ ಈತನ ಸಂಗಡಿಗರೂ ಈತನಿಗೆ ಸಾಥ್ ನೀಡಿದ್ದಾರೆ. ಇದೀಗ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹಲ್ಲೆ ನಡೆಸಿದಾತನನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ