ಅಮೆರಿಕಾ ಕನ್ನಡಿಗರೊಂದಿಗೆ ಬಿ.ಎಸ್.ಯಡಿಯೂರಪ್ಪ ಸಂವಾದ

ಶನಿವಾರ, 15 ಅಕ್ಟೋಬರ್ 2016 (13:13 IST)
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್.ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಮೂಲಕ ಅಮೆರಿಕಾ ಕನ್ನಡಿಗರೊಂದಿಗೆ ಸಂವಾದ ನಡೆಸಿದರು. 
 
ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಹೇಗೆ ಇತ್ಯರ್ಥ್ಯಗೊಳಿಸುತ್ತಿರಾ ಎಂದು ಅನಿವಾಸಿ ಕನ್ನಡಿಗರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅಂತರ ರಾಜ್ಯ ಜಲ ವಿವಾದಗಳನ್ನು ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಿಕೊಳ್ಳಬೇಕಿದೆ. ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ. ಆದರೆ, ಸಭೆಗೆ ಗೋವಾ ಹಾಗೂ ಮಹರಾಷ್ಟ್ರದ ವಿಪಕ್ಷ ನಾಯಕರು ಪಾಲ್ಗೊಳ್ಳುತ್ತಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.
 
ಖನಿಜ ಸಂಪತ್ತು ಇಲ್ಲಿಯೇ ಉಪಯೋಗವಾಗಬೇಕು. ಅಕ್ರಮ ಗಣಿಕಾರಿಕೆ ತಡೆಯಲು ಪ್ರಧಾನಿ ಮೋದಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ನಾವು ಸಹ ಅವರ ಮಾದರಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ