ಆಡಳಿತ ಪಕ್ಷದ ಶಾಸಕರ ಅಸಮಾಧಾನದಲ್ಲಿ ನಮ್ಮ ಪಾತ್ರವಿಲ್ಲ-ಬಿ.ಎಸ್.ಯಡಿಯೂರಪ್ಪ
ಶುಕ್ರವಾರ, 8 ಫೆಬ್ರವರಿ 2019 (06:39 IST)
ರಾಯಚೂರು : ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು 40, 50 ಕೋಟಿ ರೂ. ಆಫರ್ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆರೋಪವನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಳ್ಳಿಹಾಕಿದ್ದಾರೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನಮಗೆ ಕೋಟಿ ರೂ.ಗೆ ಎಷ್ಟು ನೋಟು ಇರುತ್ತವೆ ಅಂತ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
ನಾವು ಆಫರ್ ಮಾಡುವುದಾದರೆ ಅವರ ಶಾಸಕರು ಹರಾಜಿಗೆ ಇದ್ದರೇನು ಎಂದು ಪ್ರಶ್ನಿಸಿದ ಅವರು ಮೈತ್ರಿ ಸರ್ಕಾರದಲ್ಲಿ ಇಪ್ಪತ್ತು ಜನ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. ಅತೃಪ್ತ ಶಾಸಕರು ಎಲ್ಲಿಗೆ ಹೋಗಿದ್ದಾರೋ ನಮಗೆ ಗೊತ್ತಿಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಡಳಿತ ಪಕ್ಷದ ಶಾಸಕರ ಅಸಮಾಧಾನದಲ್ಲಿ ನಮ್ಮ ಪಾತ್ರವಿಲ್ಲ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.