ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಎಸ್ ಯಡಿಯೂರಪ್ಪ ತುಲಾಭಾರ

Krishnaveni K

ಸೋಮವಾರ, 24 ಜೂನ್ 2024 (12:17 IST)
Photo Credit: Facebook
ಸುಳ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಕೇಸ್ ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಯಡಿಯೂರಪ್ಪ ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಅಂಗಾರ ಸಾಥ್ ನೀಡಿದ್ದಾರೆ. ಸಾಮಾನ್ಯವಾಗಿ ಯಡಿಯೂರಪ್ಪ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುತ್ತಾರೆ. 

ಇದಾದ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಸಾಧ್ಯವಾಗಿದ್ದು ನನ್ನ ಸೌಭಾಗ್ಯ. ಈ ಬಾರಿ ಉತ್ತಮ ಮಳೆ-ಬೆಳೆಯಾಗಿ ರೈತರ ಸಂಕಷ್ಟ ನಿವಾರಣೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೂಡಾ ಜೊತೆಗಿದ್ದರು.

ಇಂದು ಮಧ್ಯಾಹ್ನದ ನಂತರ ಅವರು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಸುಳ್ಯದಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ