ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ದಿಡೀರ್ ಸಭೆ
ನಿನ್ನೆಯಷ್ಟೇ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸಿದ್ದರು.
ಈ ಹಿನ್ನಲೆಯಲ್ಲಿ ಇದರ ಬಗ್ಗೆ ಚರ್ಚಿಸಲು ಬಿಜೆಪಿ ನಾಯಕರನ್ನು ಒಗ್ಗೂಡಿಸಿ ಬಿಎಸ್ ವೈ ಇಂದು ಸಭೆ ನಡೆಸುತ್ತಿದ್ದಾರೆ. ಈ ವಿಚಾರವನ್ನು ಹೇಗೆ ಪರಿಗಣಿಸಬೇಕು, ಕೇಂದ್ರಕ್ಕೆ ಯಾವ ರೀತಿ ಒತ್ತಡ ತರಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.