ಏರ್ ಶೋ ಸ್ಥಳಾಂತರವಾಗಲು ಬಿಡಲ್ಲ ಎಂದ ಬಿಎಸ್ ವೈ

ಸೋಮವಾರ, 13 ಆಗಸ್ಟ್ 2018 (12:05 IST)
ಬೆಂಗಳೂರು: ಪ್ರತಿಷ್ಠಿತ ಏರ್ ಶೋ 2019 ರ ಕಾರ್ಯಕ್ರಮವನ್ನು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರಿಸಲಾಗುತ್ತದೆ ಎಂಬ ವರದಿಗಳ ಬೆನ್ನಲ್ಲೇ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
 

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪ್ರತಿ ವರ್ಷದ ಪದ್ಧತಿಗೆ ತಿಲಾಂಜಲಿ ಇಟ್ಟು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರಿಸಲು ಯೋಜನೆ ನಡೆಯುತ್ತಿದೆ ಎಂದು ಸುದ್ದಿಗಳು ಬಂದಿತ್ತು. ಈ ಬಗ್ಗೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ‍್ವರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ ವೈ ಏರ್ ಇಂಡಿಯಾ ಶೋವನ್ನು ಲಕ್ನೋಗೆ ಸ್ಥಳಾಂತರಿಸಲು ಅವರು ಕೇಳಿದ್ದಾರಷ್ಟೇ. ಆದರೆ ಇದರ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಸ್ವತಃ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಹೇಳಿದ್ದಾರೆ. ಹೀಗಿರುವಾಗ ಕಾಂಗ್ರೆಸ್,  ಜೆಡಿಎಸ್ ನಾಯಕರು ಬೇಜವಾಬ್ಧಾರಿಯುತ ಹೇಳಿಕೆ ನೀಡುತ್ತಿದ್ದಾರೆ. ನಾವು, ಬಿಜೆಪಿ ಶಾಸಕರು, ಸಂಸದರು ಏರ್ ಶೋ ಸ್ಥಳಾಂತರವಾಗದಂತೆ ಒತ್ತಡ ಹೇರುವ ಪ್ರಯತ್ನ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದ್ದಾರೆ.

ಆದರೆ ಉತ್ತರ ಪ್ರದೇಶದ ಲಕ್ನೋದಲ್ಲಿ ಏರ್ ಶೋಗಾಗಿ ಅಲ್ಲಿನ ವಾಯು ನೆಲೆಯಲ್ಲಿ ಸಕಲ ತಯಾರಿ ನಡೆಯುತ್ತಿದೆ. ಇದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ