ನಮ್ಮ ರಾಜ್ಯದಲ್ಲೇ ನಡೆಯುತ್ತಿರುವ ಲೈಂಗಿಕ ಅಪರಾಧಗಳು ಸಿಎಂ ಕಣ್ಣಿಗೆ ಕಾಣುತ್ತಿಲ್ಲವೇ?: ಯಡಿಯೂರಪ್ಪ ಪ್ರಶ್ನೆ
‘ಸಿದ್ದರಾಮಯ್ಯನವರೇ ನಿಮ್ಮ ಪಕ್ಷ ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡುತ್ತಿದೆ. ಆದರೆ ನಿಮ್ಮದೇ ಆಡಳಿತದ ಸರ್ಕಾರವಿರುವ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಶೇ. 11 ರಷ್ಟು ಹೆಚ್ಚಾಗಿವೆ. ಇದರ ಬಗ್ಗೆ ನೀವೇಕೆ ಮೌನ ವಹಿಸಿದ್ದೀರಿ?’ ಎಂದು ಬಿಎಸ್ ವೈ ಟ್ವಿಟರ್ ಮೂಲಕ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ಕತುವಾ ಮತ್ತು ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಹಿನ್ನಲೆಯಲ್ಲಿ ಬಿಎಸ್ ವೈ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.