ಎಸ್ಎಂ ಕೃಷ್ಣರನ್ನು ಅದ್ಧೂರಿಯಾಗಿ ಬರಮಾಡಿಕೊಳ್ತಾರಂತೆ ಬಿಎಸ್ ಯಡಿಯೂರಪ್ಪ

ಗುರುವಾರ, 23 ಮಾರ್ಚ್ 2017 (11:06 IST)
ಬೆಂಗಳೂರು: ಕಾಂಗ್ರೆಸ್ ತೊರೆದು ನಿನ್ನೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬೆಂಗಳೂರಿಗೆ ಬಂದ ಮೇಲೆ ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

 

ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಸದ್ಯದಲ್ಲೇ ನಡೆಯಲಿರುವ ಉಪ ಚುನಾವಣೆ ಪ್ರಚಾರಕ್ಕೂ ಅವರನ್ನು ಕರೆತರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

 
ನಿನ್ನೆ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಎಸ್ ಎಂ ಕೃಷ್ಣ ಇಂದು ಪ್ರಧಾನಿ ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ. ಹೀಗಾಗಿ ಕೃಷ್ಣ ಬೆಂಗಳೂರಿಗೆ ಬಂದ ಕೂಡಲೇ ಅವರನ್ನು ಬರಮಾಡಿಕೊಳ್ಳಲು ಸಿದ್ಧತೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ