ಬೆಂಗಳೂರು: ಇತ್ತೀಚೆಗೆ ನಡೆದ ಉಪ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬದಲಾವಣೆಗೆ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿತ್ತು.
ಆದರೆ ಇದೀಗ ಹೈಕಮಾಂಡ್ ಮನಸ್ಸು ಬದಲಾಯಿಸಿದ್ದು, ಬಿಎಸ್ ವೈ ಬೀಸುವ ಕತ್ತಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ವೈಫಲ್ಯ ಬಳಿಕ ರಾಜ್ಯಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಹೊಸ ನಾಯಕನನ್ನು ಆಯ್ಕೆ ಮಾಡಬಹುದು ಎಂಬ ಗುಸು ಗುಸು ಬಿಜೆಪಿ ವಲಯದಲ್ಲಿ ಕೇಳಿಬಂದಿತ್ತು.
ಆದರೆ ಈ ಊಹಾಪೋಹಗಳಿಗೆ ಈಗ ಹೈಕಮಾಂಡ್ ಫುಲ್ ಸ್ಟಾಪ್ ನೀಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಈಗ ಬಿಎಸ್ ವೈರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತೊಗೆದರೆ ಇಲ್ಲದ ಗೊಂದಲ ಸೃಷ್ಟಿಯಾಗಬಹುದು. ಹೀಗಾಗಿ ಬಿಎಸ್ ವೈರನ್ನು ಬದಲಾಯಿಸುವ ಬಗ್ಗೆ ಬಹಿರಂಗ ಹೇಳಿಕೆ ಕೊಡಬಾರದು. ಸದ್ಯಕ್ಕೆ ಅವರನ್ನು ಯಾರೂ ಡಿಸ್ಟರ್ಬ್ ಮಾಡಬಾರದು ಎಂದು ಬಿಜೆಪಿ ವರಿಷ್ಠ ಮಂಡಳಿ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಬಿಎಸ್ ವೈ ಸದ್ಯಕ್ಕೆ ಪಾರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.