.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ದೂರಿನಲ್ಲಿ ಬಿ.ಎಸ್.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್‌ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್‌ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕೆ.ರವಿ, ಬಿಎಸ್‌ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.