ಹೆಚ್ಡಿ ಕುಮಾರಸ್ವಾಮಿ ಸಿಎಂ ಗಾದಿ ಏರುವುದು ಖಚಿತವಾಗ್ತಿದ್ದಂತೆ ಗದಗನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತು. ಗದಗ ನಗರದ ಗಾಂಧಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು. ರೈತಪರ ಸರ್ಕಾರ ಈ ಬಾರಿ ಮತ್ತೆ ರಾಜ್ಯದಲ್ಲಿ ಆಡಳಿತಕ್ಕೆ ಬಂತು ಅಂತ ಹರುಷ ವ್ಯಕ್ತಪಡಿಸಿದ್ರು. ಇನ್ನು ಈ ಸಂದರ್ಭದಲ್ಲಿ ಜಿಡಿಎಸ್ ನ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ರು.