ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ

ಸೋಮವಾರ, 11 ಸೆಪ್ಟಂಬರ್ 2023 (10:14 IST)
ಬೆಂಗಳೂರು : ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಸ್ವಪಕ್ಷದವರ ವಿರುದ್ಧವೇ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಡುಗಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಾಕಷ್ಟು ಡ್ಯಾಮೇಜ್ ಆದ ಮೇಲೆ ಬಿಎಸ್ವೈ ಅವರನ್ನ ಮುಂದೆ ತಂದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ವೈ ನೋಡದ ಹಳ್ಳಿ ಇಲ್ಲ. ಬಿಎಸ್ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣವಾಗಿದೆ. ಗ್ರಾಪಂ ಗೆಲ್ಲುವುದಕ್ಕೆ ಆಗದೇ ಇರುವವರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ಮುಖ ನೋಡಿ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ.

ಈಗ ವೋಟ್ ಬೇಕು ಅಂತ ಬಿಎಸ್ವೈ ನಾಯಕತ್ವ ಅಂತ ಹೇಳುತ್ತಿದ್ದಾರೆ. ನಾನು ಎಂಪಿ ಚುನಾವಣೆ ಆಕಾಂಕ್ಷಿ. ಟಿಕೆಟ್ ಬಗ್ಗೆ ಕಾದು ನೋಡುತ್ತೇನೆ. ಟಿಕೆಟ್ ಸಿಗದೇ ಇದ್ದರೆ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಎಂದು ತಿಳಿಸಿದ್ದಾರೆ. 

ನನ್ನ ಹೋರಾಟ ಯಾರ ವಿರುದ್ಧವೂ ಕತ್ತಿ ಮಸೆಯೋಕೆ ಅಲ್ಲ. ಬಹಳ ಮಾತನಾಡುವವರ ಕೊಡುಗೆ ಏನು? ಸಂಘಟನೆ ಉಳಿಯೋಕೆ ಕೆಲಸ ಮಾಡುತ್ತೇನೆ. ನಾಳೆ ಮಾಡಾಳು ವಿರೂಪಾಕ್ಷಪ್ಪರನ್ನ ಭೇಟಿ ಮಾಡುತ್ತೇವೆ.

ರೆಬೆಲ್ ರೇಣುಕಾಚಾರ್ಯ ಅಂತ ಕರೆದುಕೊಳ್ಳಲಿ. ನನ್ನ ಮೇಲೆ ತೂಗುಗತ್ತಿ ತೂಗುತ್ತಾ ಇದೆ. ನಾನು ಯಾವುದಕ್ಕೂ ಹೆದರಲ್ಲ. ನೋಟಿಸ್ಗೆ ಉತ್ತರ ಕೊಡುವುದಿಲ್ಲ. ಬಿಎಸ್ವೈ ವಿರುದ್ಧ ಮಾತನಾಡಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಿ. ಈಗ ನಿಮಗೆ ಬಿಎಸ್ವೈ ಬೇಕಾ ಎಂದು ಸ್ವಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ