ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡುವಂತೆ ಕೋರಿ ಬಿಎಸ್‌ವೈ ರಿಟ್

ಮಂಗಳವಾರ, 22 ಆಗಸ್ಟ್ 2017 (14:07 IST)
ಬಿಎಸ್ ಯಡಿಯೂರಪ್ಪ ವಿರುದ್ಧ ಎಸಿಬಿ ಇಲಾಖೆ ಎಫ್ಐಆರ್ ಹಿನ್ನೆಲೆಯಲ್ಲಿ, ಎಫ್ಐಆರ್‌ಗೆ ಮಧ್ಯಂತರ ತಡೆ ನೀಡುವಂತೆ ಯಡಿಯೂರಪ್ಪ ಪರ ವಕೀಲರು ಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದಾರೆ.
ಎಫ್ಐಆರ್‌ಗೆ ಮಧ್ಯಂತರ ತಡೆ ನೀಡುವಂತೆ ಬಿಎಸ್‌ವೈ ಪರ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. 
 
ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಎಸಿಬಿ ಪರ ವಕೀಲರು ಕೋರ್ಟ್‌ಗೆ ಕೋರಿದ್ದಾರೆ.
 
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಕುರಿತಂತೆ ಎಸಿಬಿಯಲ್ಲಿ ಯಡಿಯೂರಪ್ಪ ವಿರುದ್ಧ ಖಾಸಗಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ