ಭಾರತ್ ಬಂದ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರ ಎಂದ ಬಿಎಸ್ ವೈ
ಸೋಮವಾರ, 10 ಸೆಪ್ಟಂಬರ್ 2018 (13:24 IST)
ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಇದಕ್ಕೆ ಜೆಡಿಎಸ್ ಕೂಡ ಬೆಂಬಲ ಸೂಚಿಸಿದೆ. ಈ ಬಗ್ಗೆ ಇದೀಗಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಇಂದಿನ ಭಾರತ್ ಬಂದ್ ದುರುದ್ದೇಶದಿಂದ ಕೂಡಿದ್ದು, ತೈಲ ಬೆಲೆ ಯಾಕೆ ಹೆಚ್ಚಳವಾಗಿದೆ ಎಂದು ಜಗತ್ತಿಗೇ ಗೊತ್ತು ವ್ಯವಸ್ಥಿತವಾಗಿ ಕೇಂದ್ರದ ವಿರುದ್ಧ ಬಂದ್ ಮಾಡಿಸಿದ್ದಾರೆ ಎಂದು ಆರೊಪಿಸಿದ್ದಾರೆ.
ಹಾಗೇ ಇದು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತರವಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಸಾರ್ವಜನಿಕರಿಗಾಗಿ ತೊಂದರೆಯಾಗದ ರೀತಿ ಬಂದ್ ಮಾಡಲಿ ಅದಕ್ಕೆ ನಮ್ಮ ಅಭ್ಯಂತರವೇನಿಲ್ಲ ಎಂದು ಬಿಎಸ್ ವೈ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.