ಬಿಬಿಎಂಪಿ ಬಜೆಟ್‍ಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ಬೆಂಗಳೂರು ಮಹಾನಗರ ಉಸ್ತುವಾರಿ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‍ಗೆ ಒಪ್ಪಿಗೆ ಸೂಚಿಸಿದ್ದು, ನಾಳೆ 2022-23ನೇ ಸಾಲಿನ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.
ಬಿ ಖಾತೆಯ ಆಸ್ತಿಗಳಿಗೆ ಎ ಖಾತೆ ಹಂಚಿಕೆಯ ಕ್ರಮ, ರಸ್ತೆ, ಕೆರೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ಅಂಗವಿಕಲರಿಗೆ ಈ ಬಾರಿಯ ಬಜೆಟ್‍ನಲ್ಲಿ ಬಂಪರ್ ಕೊಡುಗೆ ನಿರೀಕ್ಷಿಸಲಾಗಿದೆ. ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗಿದೆ