ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ಬಜೆಟ್ : ಸಿದ್ದರಾಮಯ್ಯ

ಗುರುವಾರ, 2 ಫೆಬ್ರವರಿ 2023 (10:22 IST)
ಬೆಂಗಳೂರು : ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್,

ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಿರುದ್ಯೋಗದ ಪ್ರಮಾಣದಲ್ಲಿ ಹೆಚ್ಚಾಗಿದೆ. ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಅಂದರೆ ಸುಮಾರು ಶೇ.54ರಷ್ಟು ಉದ್ಯೋಗವನ್ನು ಸೃಷ್ಟಿಸುವ ಮತ್ತು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆಯನ್ನು ನೀಡುವ ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ