ಬಸ್ ಪಲ್ಟಿ: 10 ಜನರಿಗೆ ಗಂಭೀರ ಗಾಯ

ಸೋಮವಾರ, 31 ಆಗಸ್ಟ್ 2015 (09:37 IST)
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ಒಂದು ಪಲ್ಟಿಯಾಗಿ, 10 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ನೆಲಮಂಗಲದ ಯಂಟಗಾನಹಳ್ಳಿ ಬಳಿ  ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
 
ಮಂಗಳೂರಿನಿಂದ ನಿನ್ನೆ ರಾತ್ರಿ ಬೆಂಗಳೂರಿಗೆ ಹೊರಟಿದ್ದ  ಐಡಿಯಲ್ ಟ್ರಾವೆಲ್ಸ್ ಬಸ್ ಯಂಟಗಾನಹಳ್ಳಿ ಬಳಿಯಿರುವ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದೆ. ಪರಿಣಾಮ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. 
 
ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ