ಪಲ್ಟಿಯಾದ ಖಾಸಗಿ ಬಸ್: 34 ಜನರಿಗೆ ಗಂಭೀರ ಗಾಯ

ಬುಧವಾರ, 28 ಸೆಪ್ಟಂಬರ್ 2016 (08:02 IST)
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಒಟ್ಟು 34 ಜನರು ಗಾಯಗೊಂಡ ದುರ್ಘಟನೆ ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ನಡೆದಿದೆ. 
ಹೊನ್ನಾವರ ತಾಲ್ಲೂಕಿನ ಗುಣವಂತೆ ಬಳಿ  ಇಂದು ಮುಂಜಾನೆ ಈ ಅಪಘಾತ ನಡೆದಿದ್ದು ಮುಂಬೈನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ವಿಆರ್‌ಎಲ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದ್ದು,ಗಾಯಾಳುಗಳನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ, 
 
ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ