ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ನಾಲ್ವರು ಸಾವು, 35 ಮಂದಿಗೆ ಗಾಯ

ಶುಕ್ರವಾರ, 29 ಮೇ 2015 (15:32 IST)
ಜಿಲ್ಲೆಯ ಚನ್ನಗಿರಿ ಪಟ್ಟಣದಿಂದ ಶಿವಮೊಗ್ಗ ನಗರಕ್ಕೆ ತರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 35 ಮಂದಿ ಗಾಯಗೊಂಡಿರುವ ಘಟನೆ ಚೆನ್ನಗಿರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. 
 
ಅಪಘಾತದಲ್ಲಿ ಮೃತಪಟ್ಟವರನ್ನು ಪ್ರವೀಣ್(21), ಮೂರ್ತಿ, ಮುಸಾಫಿರ್ ಹಾಗೂ ಉಮಾಪತಿ ಎಂದು ಹೇಳಲಾಗಿದೆ. ಇನ್ನು ಘಟನೆಯಲ್ಲಿ ಬಸ್ ನಲ್ಲಿದ್ದ 35 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
 
ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸರು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ