ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ..?
ಸಿಲಿಕಾನ್ ಸಿಟಿ ಬೆಂಗಳೂರು ಜನರ ಜೀವನಾಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ BMTC ಬಸ್ಗಳಲ್ಲಿ ಓಡಾಡುವ ಜನರಿಗೆ ಶಾಕ್ ಕಾದಿದೆ. ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ತಟ್ಟಲಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ .20ರಷ್ಟು ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು..ಆದ್ರೆ ಈಗ 2ನೇ ಪ್ರಸ್ತಾವನೆಯಲ್ಲಿ ಶೇ .35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ಕಳೆದ ವಾರ BMTC ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.