ಪೆಟ್ರೊಲ್ ಬೆಲೆ ಏರಿಕೆ ಎಫೆಕ್ಟ್: ಬಸ್ ಪ್ರಯಾಣ ದರ ದುಬಾರಿ

ಮಂಗಳವಾರ, 4 ಸೆಪ್ಟಂಬರ್ 2018 (18:17 IST)
ಅಗತ್ಯ ವಸ್ತುಗಳ ಬೆಲೆ ಏರಿಕೆ ಜನರನ್ನು ಹೈರಾಣಾಗಿಸಿದರೆ, ಇನ್ನೊಂದೆಡೆ ಪೆಟ್ರೋಲ್, ಡಿಸೇಲ್ ದರ ಹೆಚ್ಚಳವಾಗಿದೆ. ಏತನ್ಮಧ್ಯೆ ಬಸ್ ಪ್ರಯಾಣ ದರವೂ ಪ್ರಯಾಣಿಕರ ಜೇಬಿಗೆ ಅಧಿಕ ಪ್ರಮಾಣದಲ್ಲಿ ಕತ್ತರಿ ಹಾಕಲಾರಂಭಿಸಿದೆ.

ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರವ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ನಿತ್ಯವೂ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾರಿಗೆ ಇಲಾಖೆ ನಷ್ಟದಲ್ಲಿ ಹೋಗುವುದನ್ನು ತಡೆಯಲು ಬಸ್ ಪ್ರಯಾಣ ದರ ಅನಿವಾರ್ಯ ಎಂದಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಜತೆ ಚರ್ಚಿಸಿದ ಬಳಿಕ ಬಸ್ ಪ್ರಯಾಣ ದರದ ಏರಿಕೆ ಪ್ರಮಾಣವನ್ನು ತಿಳಿಸುವುದಾಗಿ ಹೇಳಿದರು.
ಕಳೆದ ಮೂರು ತಿಂಗಳ ಹಿಂದೆಯೇ ಶೇ.18ರಷ್ಟು ಪ್ರಯಾಣ ದರ ಏರಿಕೆ ಮಾಡುವಂತೆ ಸರಕಾರಕ್ಕೆ ಸಾರಿಗೆ ಸಂಸ್ಥೆ ಮನವಿ ಸಲ್ಲಿಸಿದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ