ಬಸ್​​-ಟ್ರಕ್​​​​ ಡಿಕ್ಕಿ, 8 ಸಾವು

ಬುಧವಾರ, 28 ಸೆಪ್ಟಂಬರ್ 2022 (21:10 IST)
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಬಸ್ಸಿನಲ್ಲಿದ್ದ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ಇಸಾನಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಖಮರಿಯಾ ಪೊಲೀಸ್ ಪೋಸ್ಟ್ ಬಳಿ ಶಾರದಾ ನದಿಯ ಸೇತುವೆಯ ಮೇಲೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಖಾಸಗಿ ಬಸ್‌ನಲ್ಲಿ ಕುಳಿತಿದ್ದ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 24 ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಧೌರಹರಾದಿಂದ ಸುಮಾರು 50 ಮಂದಿ ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ಸೊಂದು ಲಖಿಂಪುರಕ್ಕೆ ಬರುತ್ತಿತ್ತು. ಇಸಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಮರಿಯಾ ಪೊಲೀಸ್ ಪೋಸ್ಟ್ ಬಳಿ ಲಖಿಂಪುರದಿಂದ ಬಹ್ರೈಚ್‌ಗೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ