ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಮುಂದುವರಿಕೆ

ಗುರುವಾರ, 5 ಜುಲೈ 2018 (16:47 IST)
ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಉಡುಪಿ ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಅವರ ಮುಂದುವರಿಕೆಗೆ ರಾಜ್ಯ ಹೈ ಕೋರ್ಟ್ ಹಸಿರು ನಿಶಾನೆ ತೋರಿದೆ.

ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ವಿಶೇಷ ಅಭಿಯೋಜಕರ ನೇಮಕವನ್ನು ಪ್ರಶ್ನಿಸಿ ಹೈ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿರಸೃತಗೊಳಿಸಿದ್ದರು. ಈ ಮೂಲಕ ಶಾಂತಾರಾಮ್ ಶೆಟ್ಟಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿದ್ದಾರೆ.

ಹೈ ಕೋರ್ಟ್ ಆದೇಶದಂತೆ ಇನ್ನು ಮುಂದೆ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಾದ ಮಂಡನೆಯನ್ನು ರಾಜ್ಯ ಸರಕಾರ ನೇಮಿಸಿದ ವಿಶೇಷ ಸರಕಾರಿ ಅಭಿಯೋಜಕ ಶಾಂತಾರಾಮ್ ಶೆಟ್ಟಿ ಮುಂದುವರೆಸಲಿದ್ದಾರೆ. ಪ್ರಕರಣದ ವಿಶೇಷ ಅಭಿಯೋಜಕರಾಗಿ ಶಾಂತಾರಾಮ್ ಶೆಟ್ಟಿ ಅವರನ್ನು ರಾಜ್ಯ ಸರಕಾರ 2016ರ ಅಕ್ಟೋಬರ್ 26ರಂದು ನೇಮಕ ಮಾಡಿತ್ತು. ಆದ್ರೆ ಈ ಆದೇಶದ ವಿರುದ್ದ ಆರೋಪಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್‍ಗೆ 2 ಬಾರಿ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್ ಅದಕ್ಕೆ ತಡೆಯಾಜ್ಞೆಯನ್ನು ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವು ಗೊಳಿಸುವಂತೆ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಡ್ತಿ ಸಲ್ಲಿಸಿದ ಅಜಿಯನ್ನು ವಿಚಾರಣೆ ನಡೆಸಿದ ಹೈ ಕೊರ್ಟ್ 2018ರ ಜನವರಿ 31ರಂದು ತಡೆಯಾಜ್ಞೆ ತೆರವುಗೊಳಿಸಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ಎಲ್ಲಾ ವಿಚಾರವನ್ನು ಕೂಲಂಕುಶವಾಗಿ ಪರಿಶೀಲಿಸಿದ ಹೈಕೋರ್ಟ್, ಪ್ರಕರಣದ ವಿಶೇಷ ಅಭಿಯೋಜಕರಾಗಿ ಶಾಂತಾರಾಮ ಶೆಟ್ಟಿ ಅವರನ್ನು ಮುಂದುವರೆಸುವ ಆದೇಶ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ