ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬುಧವಾರ, 13 ನವೆಂಬರ್ 2019 (21:04 IST)
ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡೋಕೆ ಮುಂದಾಗಿದೆ.

ಬೈ ಎಲೆಕ್ಷನ್ ನಲ್ಲಿ ಸ್ಪರ್ಧೆ ಮಾಡೋ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಅ. 14 ರಂದು ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಬಿಜೆಪಿ ಕೋರ್ ಕಮೀಟಿ ಸಭೆ ನಡೆದ ಬಳಿಕ ಮಾತನಾಡಿರೋ ಮಾಜಿ ಸಚಿವ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ತಮಗೆ ಉಸ್ತುವಾರಿ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದು, ಬಿಜೆಪಿಯಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ