ಉಪಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿಯಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಬುಧವಾರ, 30 ಜುಲೈ 2014 (15:19 IST)
ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಧೃಡವಾಗಿದ್ದು, ಬೇರೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆ ಅಂತಿಮಗೊಳ್ಳಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ