ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಗೆದ್ದೆ ಗೆಲ್ಲುತ್ತಾರೆ-ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ ವೈ

ಮಂಗಳವಾರ, 23 ಏಪ್ರಿಲ್ 2019 (10:05 IST)
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು ಗೆದ್ದೆ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಶಿಕಾರಿಪುರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಎಲ್ಲರೂ ಸೋಲುತ್ತಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ನಾಯಕರು ಕೋಟಿಗಟ್ಟಲೆ ಹಣವನ್ನು ಚುನಾವಣೆಗೆ ಖರ್ಚು ಮಾಡಿದ್ದಾರೆ. ಆದರೂ ಬಿ.ವೈ. ರಾಘವೇಂದ್ರ ಒಂದುವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.


ಇನ್ನು ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಜೆಡಿಎಸ್ ನ ಭಿನ್ನಮತ ಹೆಚ್ಚಾಗುತ್ತದೆ. ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ನಡುವೆ ಸಿಎಂ ವಿಚಾರವಾಗಿ ಪೈಪೋಟಿ ಹೆಚ್ಚಾಗಿದ್ದು, ಒಂದು ಅವಕಾಶಕ್ಕಾಗಿ ಅವರು ಕಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ